ಹವಾಮಾನ ಮುನ್ಸೂಚನೆ: ರಾಜ್ಯದ ಈ ಭಾಗಗಳಲ್ಲಿ ಇಂದು ಮಳೆ ಸಾಧ್ಯತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ರಾಜ್ಯದಲ್ಲಿ ಬಿಸಿಲು ಮಳೆಯ ಕಣ್ಣಾಮುಚ್ಚಾಲೆ ಮುಂದುವರಿದಿದೆ.
ಏ.23ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯಂತೆ ಆಗುಂಬೆ, ಶಿೃಂಗೇರಿ, ತೀರ್ಥಹಳ್ಳಿ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಉತ್ತಮ ಮಳೆ, ಕೊಡಗಿನಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜೆಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ಮೋಡದ ವಾತಾವರಣ ಮುಂದುವರಿಯಲಿದ್ದು, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಒಂದೆರಡು ಭಾಗಗಳಲ್ಲಿ ಸಾಧಾರಣ ಮಳೆ ಸಾಧ್ಯತೆ ಇದೆ.
ಇನ್ನು ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಸಾಧ್ಯತೆ, ರಾಜ್ಯದ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!