WEATHER | ರಾಜ್ಯದಲ್ಲಿ ಇನ್ನು ನಾಲ್ಕು ದಿನಗಳು ಗುಡುಗು, ಮಿಂಚು ಸಹಿತ ಭಾರಿ ಮಳೆ

ರಾಜ್ಯದ ಕೆಲವೆಡೆ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗಾಳಿಯ ವೇಗದ ಬಗ್ಗೆ ತಜ್ಞರು ಎಚ್ಚರಿಸಿದ್ದಾರೆ. ನೆಲಮಟ್ಟದಲ್ಲಿ ಗಾಳಿಯ ವೇಗ ಗಂಟೆಗೆ 30-40 ಕಿ.ಮೀ. ಇರಲಿದೆ.

ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಕಲಬುರಗಿ, ವಿಜಯಪುರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಕೊಡಗು, ಶಿವಮೊಗ್ಗ ಮತ್ತು ಮೈಸೂರಿನಲ್ಲಿ ಭಾನುವಾರ ಲಘು ಮಳೆಯಾಗಲಿದೆ.

ಮುಂದಿನ ಮೂರು ದಿನಗಳಲ್ಲಿ ದೇಶದ ದಕ್ಷಿಣ ಪ್ರದೇಶಗಳಲ್ಲಿ ಗಾಳಿಯ ವೇಗ ಗಂಟೆಗೆ 30-40 ಕಿಮೀ ತಲುಪುವ ನಿರೀಕ್ಷೆಯಿದೆ. ಏ.17 ರವರೆಗೆ ರಾಜ್ಯದ ಕೆಲವು ಭಾಗಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!