ರಾಜ್ಯದ ಜನತೆಗೆ ಗುಡ್‌ನ್ಯೂಸ್ ಸಿಕ್ಕಿದೆ. ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ತಾಪಮಾನ ಏರಿಕೆ ಹಿನ್ನೆಲೆ ಮಳೆ ಮಾರುತಗಳು ಸಕ್ರಿಯವಾಗಿದ್ದು, ಮಾ.11ರಿಂದ 14ರವರೆಗೆ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ ನೀಡಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯುವ ಸಾಧ್ಯತೆ ಇದೆ.
ಮುಂದಿನ ಮೂರು ತಿಂಗಳು ಹೆಚ್ಚು ಬಿಸಿಲು ಅಬ್ಬರಿಸುವ ಸಾಧ್ಯತೆ ಇದೆ. ಈ ಮಧ್ಯೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.