WEATHER |ರಾಜ್ಯದ ಹಲವೆಡೆ ಹೀಟ್‌ ವೇವ್‌ ಅಲರ್ಟ್‌: ಬಿಸಿ ಗಾಳಿ ಎಚ್ಚರಿಕೆ

ಕರ್ನಾಟಕ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಾದ್ಯಂತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಹಲವೆಡೆ ಗುಡುಗು, ಮಿಂಚು ಸಹಿತ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ. ಉತ್ತರ ಕರ್ನಾಟಕದ ಭಾಗಗಳಲ್ಲಿಯೂ ಹೀಟ್ ಅಲರ್ಟ್ ನೀಡಲಾಗಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಾಮರಾಜನಗರ, ರಾಮನಗರ, ಮಂಡ್ಯ, ಮೈಸೂರು, ತುಮಕೂರು ರಾಮನಗರ, ದಾವಣಗೆರೆ ಮತ್ತು ಚಿತ್ರದುರ್ಗದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಹಾವೇರಿ, ಬೆಳಗಾವಿ ಮತ್ತು ಧಾರವಾಡದ ಉತ್ತರ ಒಳನಾಡಿನಲ್ಲಿ ಪ್ರತ್ಯೇಕ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬೀದರ್, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ಗದಗ, ಧಾರವಾಡ, ದಾವಣಗೆರೆ, ಕೋಲಾರ, ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳಲ್ಲಿ ಬಿಸಿಗಾಳಿ ತೀವ್ರಗೊಳ್ಳುವ ಸಾಧ್ಯತೆ ಇದೆ.

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!