ಕರ್ನಾಟಕದಲ್ಲಿ ಬಿಸಿಲ ಝಳ ಹೆಚ್ಚಾಗಿದೆ, ಅದರಲ್ಲೂ ಕರಾವಳಿ ಜಿಲ್ಲೆಗಳಲ್ಲಿ ಶಾಖದ ಅಲೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ,ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಕೂಡ ಬಿಸಿಲು ಹೆಚ್ಚಿರಲಿದೆ.
ಗರಿಷ್ಠ ತಾಪಮಾನ ಕರಾವಳಿಯಲ್ಲಿ 36-38 ಡಿಗ್ರಿ ಸೆಲ್ಸಿಯಸ್, ಬೆಳಗಾವಿ, ಬೀದರ್, ವಿಜಯಪುರ, ಧಾರವಾಡ, ಗದಗ, ಕೊಪ್ಪಳ ಮತ್ತು ಹಾವೇರಿಯಲ್ಲಿ 30-33 ಡಿಗ್ರಿ ಸೆಲ್ಸಿಯಸ್, ರಾಯಚೂರು, ಬಾಗಲಕೋಟೆ ಮತ್ತು ಕಲಬುರಗಿಯಲ್ಲಿ 34-36 ಡಿಗ್ರಿ ಸೆಲ್ಸಿಯಸ್, ಬೆಂಗಳೂರು, ಚಿತ್ರದುರ್ಗ, ಹಾಸನ, ಮಡಿಕೇರಿ, ಶಿವಮೊಗ್ಗ ಮತ್ತು ಮೈಸೂರಿನಲ್ಲಿ 31-33 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.