WEATHER | ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆ

30ರ ಮಂಗಳವಾರ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಜಿಲ್ಲೆಗಳಲ್ಲಿ ಬಿಸಿಲಿನ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಏ. 30 ರಿಂದ ಮೇ 5 ರ ವರೆಗೆ ರಾಜ್ಯದಾದ್ಯಂತ ಒಣ ಹವೆ ಇರಲಿದ್ದು, ಮೇ 6 ರಂದು ಮಂಡ್ಯ ಜಿಲ್ಲೆಯ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಕೊಡಗು, ಹಾಸನ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಕೆಲವೆಡೆ ಲಘು ಮಳೆಯಾಗುವ ನಿರೀಕ್ಷೆ ಇದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣಹವೆ ಇರುತ್ತದೆ ಎಂದು ವರದಿ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!