ಕಳೆದ ಕೆಲವು ದಿನಗಳಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಬೆಳಗ್ಗೆ ಮತ್ತು ಸಂಜೆ ವೇಳೆ ಚಳಿಯ ವಾತಾವರಣ ಹೆಚ್ಚಾಗಿದೆ. ಇಂದು ಹೆಚ್ಚಿನ ಪ್ರದೇಶದಲ್ಲಿ ಚಳಿ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.