WEATHER | ಕರಾವಳಿ, ಮಲೆನಾಡು ಸುತ್ತಮುತ್ತ ಭಾರಿ ಮಳೆ, ಯೆಲ್ಲೋ ಅಲರ್ಟ್‌ ಘೋಷಣೆ

ಕರಾವಳಿ ಕರ್ನಾಟಕದಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಗುಡ್ಡಗಾಡು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಗುಡ್ಡಗಾಡು ಪ್ರದೇಶಗಳಲ್ಲಿ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಗಾಳಿ ವೇಗವು 40-50 ಕಿ.ಮೀ ವೇಗದಲ್ಲಿ ಬೀಸಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌ ನೀಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!