ಕರ್ನಾಟಕಕ್ಕೆ ಮುಂಗಾರು ಆಗಮನವಾಗಿದೆ. ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಧಾರಾಕಾರ ಮಳೆ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಯೆ ರೆಡ್ ಅಲರ್ಟ್ ನೀಡಲಾಗಿದೆ. ಬೀದರ್, ಧಾರವಾಡ, ಹಾವೇರಿ, ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ದಾವಣಗೆರೆ, ಚಾಮರಾಜನಗರ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ರಾಯಚೂರಿನಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್ಎಎಲ್ನಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.