ಕರ್ನಾಟಕದ ಕರಾವಳಿ ಪ್ರದೇಶಗಳು ಮತ್ತು ಗುಡ್ಡಗಾಡುಗಳಲ್ಲಿ ಭಾರೀ ಮಳೆಯಾಗುವುದನ್ನು ನಿರೀಕ್ಷಿಸಲಾಗಿದೆ. ಉತ್ತರ ಮತ್ತು ದಕ್ಷಿಣ ಭಾಗದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದಾಗ್ಯೂ, ರಾಜ್ಯದ ಕೆಲವು ಸ್ಥಳಗಳಲ್ಲಿ ಗುಡುಗು, ಮಿಂಚು ಮತ್ತು ಗಾಳಿಯ ವೇಗ ಗಂಟೆಗೆ 30 ರಿಂದ 40 ಕಿ.ಮೀ ಇರಲಿದೆ.
ಹೀಗಾಗಿ ದಕ್ಷಿಣ ಕನ್ನಡ, ಕೊಡಗು ಮತ್ತು ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೀದರ್, ಕಲಬುರಗಿ ಮತ್ತು ಮೈಸೂರಿನಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 35 ರಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.