WEATHER | ಧಾರಾಕಾರ ಮಳೆಯ ಮುನ್ಸೂಚನೆ, 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಮುಂದಿನ ಎರಡು ದಿನಗಳಲ್ಲಿ ಕರ್ನಾಟಕದ ಕರಾವಳಿ ಮತ್ತು ಉತ್ತರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ವಿಜಯಪುರ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!