ಇಂದು ಕರಾವಳಿಯಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಗುಡ್ಡಗಾಡು ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ರಾಜ್ಯದ ಕೆಲವೆಡೆ ಗುಡುಗು, ಮಿಂಚು ಸಹಿತ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಮತ್ತು ಗುಡ್ಡಗಾಡು ಪ್ರದೇಶಗಳಲ್ಲಿ ಮಳೆ ಮುಂದುವರಿದಿದೆ. ಗುಡುಗು ಸಹಿತ ಭಾರೀ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಆದರೆ, ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 35 ರಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಜುಲೈ 3ರವರೆಗೆ ಮೀನುಗಾರಿಕೆಗೆ ತೆರಳದಂತೆ ಮೀನುಗಾರರಿಗೆ ಸೂಚಿಸಲಾಗಿದೆ.