WEATHER | ಕರ್ನಾಟಕದಲ್ಲಿ ಮಳೆಯ ಅಬ್ಬರ: ಕರಾವಳಿ ಸೇರಿ 7 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

ಕರ್ನಾಟಕದಾದ್ಯಂತ ಮುಂಗಾರು ಪೂರ್ವ ಮಳೆಯ ಅಬ್ಬರ ಜೋರಾಗಿದೆ. ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಇಂದಿನಿಂದ ಮಳೆ ಹೆಚ್ಚಾಗಲಿದೆ.

ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ದಾವಣಗೆರೆ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

ತುಮಕೂರು, ರಾಮನಗರ, ಕೋಲಾರ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೊಪ್ಪಳ, ಬೀದರ್ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಕಳೆದ ಒಂದು ವಾರದಿಂದ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದ್ದು, ಮಳೆಯ ಪ್ರಮಾಣ ಹೆಚ್ಚಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!