WEATHER | ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಆರ್ಭಟ ಜೋರು.. ಇನ್ನು ಮೂರು ದಿನ ಭಾರೀ ಮಳೆ ಎಚ್ಚರಿಕೆ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಆರ್ಭಟ ಜೋರಾಗಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಮಲೆನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

ದಕ್ಷಿಣ ಒಳನಾಡಿನ ರಾಮನಗರ, ತುಮಕೂರು, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಇರಲಿದ್ದು, ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!