WEATHER |ರಾಜ್ಯದ ಹಲವೆಡೆ ಭಾರಿ ಮಳೆ: ಇನ್ನೊಂದು ವಾರ ಗುಡುಗು, ಸಿಡಿಲು ಸಹಿತ ಮಳೆ!

ಮುಂದಿನ 48 ಗಂಟೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಒಳನಾಡಿನ ಕಲಬುರ್ಗಿ, ವಿಜಯಪುರ ಮತ್ತು ಗುಡ್ಡಗಾಡು ಜಿಲ್ಲೆಗಳಾದ ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡಿನ ಬೀದರ್, ಕೊಪ್ಪಳ, ಯಾದಗಿರಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಕೆಲವೆಡೆ ಲಘು ಮಳೆಯಾಗುವ ನಿರೀಕ್ಷೆ ಇದೆ. ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಹಾಸನ, ಮೈಸೂರು, ಮಂಡ್ಯ ಮತ್ತು ತುಮಕೂರು ಜಿಲ್ಲೆಗಳಲ್ಲೂ ಕೆಲವೆಡೆ ಸಾಧಾರಣ ಮಳೆಯಾಗಲಿದೆ.

ಭಾನುವಾರ ಕರಾವಳಿಯ ಕೆಲವೆಡೆ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಗುಡುಗು, ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಹೊರವಲಯದಲ್ಲಿ 50-60 ಕಿ.ಮೀ ವೇಗದಲ್ಲಿ ಗಾಳಿ ಮಿಶ್ರಿತ ಮಳೆಯಾಗಲಿದೆ. ದಕ್ಷಿಣ ಪ್ರದೇಶಗಳಲ್ಲಿ, ಗಾಳಿಯ ವೇಗವು ಗಂಟೆಗೆ 30-40 ಕಿ.ಮೀ. ಇರಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!