July 26, 2026
Sunday, July 26, 2026
spot_img

WEATHER | ರಾಜ್ಯದಲ್ಲಿ ಮುಂದಿನ ಕೆಲವು ದಿನ ಭಾರೀ ಮಳೆ, 40 ಕಿ.ಮೀ ವೇಗದಲ್ಲಿ ಬೀಸಲಿದೆ ಬಿರುಗಾಳಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಾದ್ಯಂತ ಮುಂದಿನ ಕೆಲವು ದಿನಗಳ ಕಾಲ ಭಾರಿ ಮಳೆಯಾಗಲಿದ್ದು, ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಬಿರುಗಾಳಿ ಸಹಿತ ವರುಣನ ಆರ್ಭಟ ಜೋರಿರಲಿದ್ದು, ಹಲವೆಡೆ ಕಟ್ಟೆಚ್ಚರ ವಹಿಸಲಾಗಿದೆ.

ಕರಾವಳಿ ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್’

ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಸಿಡಿಲು ಹಾಗೂ ಗಂಟೆಗೆ 30 ರಿಂದ 40 ಕಿ.ಮೀ ವೇಗದ ಬಲವಾದ ಬಿರುಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಗುಡುಗು-ಮಿಂಚಿನ ಅಬ್ಬರವಿರಲಿದ್ದು, ಮುನ್ನೆಚ್ಚರಿಕೆಯಾಗಿ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಉತ್ತರ ಒಳನಾಡಿನಲ್ಲೂ ವರುಣನ ಆರ್ಭಟ

ಉತ್ತರ ಒಳನಾಡಿನ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಜಾರಿಗೊಳಿಸಲಾಗಿದೆ. ಬೆಳಗಾವಿ ಹಾಗೂ ಧಾರವಾಡದ ಕೆಲವು ಭಾಗಗಳಲ್ಲಿ ಬಿರುಗಾಳಿ ಸಹಿತ ಮುಸಲಧಾರೆ ಮಳೆಯಾಗುವ ಮುನ್ಸೂಚನೆ ಇದೆ. ಇನ್ನು ಹಾವೇರಿ, ಗದಗ ಹಾಗೂ ಬಾಗಲಕೋಟೆ ಜಿಲ್ಲೆಗಳ ಹಲವೆಡೆ ಸಾಧಾರಣ ಮಳೆಯೊಂದಿಗೆ ಬಲವಾದ ಗಾಳಿ ಬೀಸಲಿದೆ ಎಂದು ಇಲಾಖೆ ತಿಳಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !