August 11, 2026
Tuesday, August 11, 2026
spot_img

Weather | ರಾಜ್ಯದಲ್ಲಿ ಇನ್ನೆರಡು ದಿನ ಮಳೆ ಅಬ್ಬರ: ಹಲವು ಜಿಲ್ಲೆಗಳಿಗೆ ಎಚ್ಚರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಅನೇಕ ಜಿಲ್ಲೆಗಳಲ್ಲಿ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ನಿರೀಕ್ಷೆಯಿದೆ.

ಬೆಂಗಳೂರು ಸೇರಿ ಹಲವು ಜಿಲ್ಲೆಗಳಿಗೆ ಮಳೆ

ಬೆಂಗಳೂರು ನಗರ ಮತ್ತು ಗ್ರಾಮಾಂತರ ಸೇರಿದಂತೆ ಮೈಸೂರು, ಹಾಸನ, ಶಿವಮೊಗ್ಗ, ಕೊಡಗು, ಮಂಡ್ಯ, ತುಮಕೂರು, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯೊಂದಿಗೆ ಗಂಟೆಗೆ 30–40 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆ ಇದೆ.

ಇದನ್ನೂ ಓದಿ:

ಕರಾವಳಿ ಭಾಗದಲ್ಲೂ ಮಳೆ

ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಹಲವು ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ನೀಡಲಾಗಿದೆ. ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲೂ ಗಾಳಿ-ಮಳೆಯ ವಾತಾವರಣ ಮುಂದುವರಿಯಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !