ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಹುತೇಕ ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ. 30-40 ಕಿಮೀ/ಗಂಟೆ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಮತ್ತು ಉತ್ತರದ ಒಳಭಾಗದ ಕೆಲವು ಭಾಗಗಳು ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣದ ಹಲವು ಪ್ರದೇಶಗಳಲ್ಲಿ ಲಘು ಮಳೆಯಾಗುವ ನಿರೀಕ್ಷೆಯಿದೆ. ಒಂದು ಗಂಟೆ ಕಾಲ ಬೆಂಗಳೂರು ಮತ್ತು ಸುತ್ತಮುತ್ತ ಉತ್ತಮ ವಾತಾವರಣವಿದೆ. ಮುಂದಿನ 24 ಗಂಟೆಗಳಲ್ಲಿ ಹೆಚ್ಚಾಗಿ ಮೋಡ ಕವಿದ ವಾತಾವರಣ ಇರುತ್ತದೆ. ಕೆಲವೆಡೆ ಲಘು ಮಳೆಯಾಗುವ ನಿರೀಕ್ಷೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 21 ಡಿಗ್ರಿ ಸೆಲ್ಸಿಯಸ್ ಆಗಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗದಲ್ಲಿ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.