ಮುಂದಿನ ಐದು ದಿನಗಳಲ್ಲಿ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಸ್ಥಳಗಳಲ್ಲಿ ಸೆಪ್ಟೆಂಬರ್ 25 ರವರೆಗೆ ಮಳೆಯಾಗುವ ನಿರೀಕ್ಷೆಯಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.