WEATHER | ಕರಾವಳಿ, ದಕ್ಷಿಣ ಒಳನಾಡಿನ ಕೆಲವೆಡೆ ಮುಂದಿನ ಐದು ದಿನ ಭಾರೀ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಕೆಲವೆಡೆ ಮುಂದಿನ ಐದು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಚಿಕ್ಕಮಗಳೂರು, ಚಾಮರಾಜನಗರ, ಹಾಸನ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಎಚ್​ಎಎಲ್​ನಲ್ಲಿ 27.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!