ರಾಜ್ಯದಲ್ಲಿ ಮಳೆಯ ತೀವ್ರತೆ ಕೊಂಚ ತಗ್ಗಿದೆ. ಇಂದು ಕೂಡ ರಾಜ್ಯದ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಗುಡ್ಡಗಾಡು ಪ್ರದೇಶಗಳಲ್ಲಿ ಒಂದು ಅಥವಾ ಎರಡು ಕಡೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿ ಪ್ರದೇಶಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳು ಪ್ರಧಾನವಾಗಿ ಶುಷ್ಕ ವಾತಾವರಣವನ್ನು ಅನುಭವಿಸುತ್ತವೆ. ಭಾಗದಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.