ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಮುಂದಿನ ಐದು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಸಂಸ್ಥೆ ಮುನ್ಸೂಚನೆ ನೀಡಿದೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಶಿವಮೊಗ್ಗ, ಮೈಸೂರು ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಕೆಲವೆಡೆ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.