ಮುಂದಿನ ನಾಲ್ಕು ದಿನಗಳಲ್ಲಿ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಂಡ್ಯ, ಚಾಮರಾಜನಗರ, ಮೈಸೂರು, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಹಾಸನ, ಕೊಡಗು, ರಾಮನಗರ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯಾಗಲಿದೆ.
ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಕೆಲವೆಡೆ ಮತ್ತು ಉತ್ತರ ಕನ್ನಡ ಭಾಗದಲ್ಲಿ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ. ದೇಶದ ಉತ್ತರ ಭಾಗದಲ್ಲಿ ಗಾಳಿ ಶುಷ್ಕವಾಗಿರುತ್ತದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.