ರಾಜ್ಯದ ಬಹುತೇಕ ಭಾಗಗಳಲ್ಲಿ ಕಳೆದ ವಾರ ಚಳಿಯ ವಾತಾವರಣವಿತ್ತು. ಇಂದು ಬೆಳಿಗ್ಗೆ ಮತ್ತು ಸಂಜೆ ತುಂಬಾ ಚಳಿ ಇರಲಿದ್ದು, ತಾಪಮಾನವು ಕಡಿಮೆಯಾಗುವ ಸಾಧ್ಯತೆಯಿದೆ. ಮಳೆಯಾಗುವ ಸಾಧ್ಯತೆಯೂ ಇದೆ ಎಂದು ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 14 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.