ಕರಾವಳಿ ಕರ್ನಾಟಕದಲ್ಲಿ ಸಾಧಾರಣದಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಲೆನಾಡು ಮತ್ತು ಉತ್ತರ ಒಳನಾಡಿನ ಭಾಗಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಪ್ರದೇಶಗಳಲ್ಲಿ ಭಾರೀ ಮಳೆಯೊಂದಿಗೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಭಾರೀ ಮಳೆ, ಗುಡುಗು ಸಹಿತ ಗಾಳಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜೊತೆಗೆ ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ, ಚಾಮರಾಜನಗರ ಮತ್ತು ಹಾಸನ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ.