ನೈಋತ್ಯ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯು ಭಾರ ಕುಸಿತದದಿಂದಾಗಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಚಂಡಮಾರುತದ ಪರಿಣಾಮ ಬೆಂಗಳೂರಿನಲ್ಲೂ ಮಳೆಯಾಗುವ ಸಾಧ್ಯತೆ ಇದೆ. ಕೆಲವೊಮ್ಮೆ ಭಾರೀ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.