ವಾರವಿಡೀ ರಾಜ್ಯದ ಹಲವೆಡೆ ಮಳೆಯಾಗಿದೆ. ಇಂದು ಬೆಂಗಳೂರು ಸೇರಿದಂತೆ ಶಿವಮೊಗ್ಗ, ಚಿಕ್ಕಮಗಳೂರಿನ ಹಲವೆಡೆ, ಗುಡ್ಡಗಾಡು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ಇರಲಿದೆ. ಯಾದಗಿರಿ ಭಾಗದಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರುತ್ತದೆ.