ರಾಜ್ಯದಲ್ಲಿ ಬುಧವಾರ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗಂಟೆಗೆ 30 ರಿಂದ 40 ಕಿಮೀ ವೇಗದಲ್ಲಿ ಗಾಳಿ ಬೀಸಬಹುದು ಮತ್ತು ಗುಡುಗು ಸಹಿತ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡು ಜಿಲ್ಲೆಗಳಾದ ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರದಲ್ಲಿ ಪ್ರತ್ಯೇಕವಾದ ಹಗುರದಿಂದ ಸಾಧಾರಣ ಮಳೆಯಾಗಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31 ಮತ್ತು 21 ಡಿಗ್ರಿ ಸೆಲ್ಸಿಯಸ್ ಆಗಿದೆ.
ಮುಖ್ಯವಾಗಿ ಗುಡ್ಡಗಾಡು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಹಾಸನ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಮತ್ತು ಚಿತ್ರದುರ್ಗ ಮತ್ತು ಮಂಡ್ಯ ಒಳನಾಡಿನ ಜಿಲ್ಲೆಗಳು ಮತ್ತು ಕರಾವಳಿ ಪ್ರದೇಶಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.