ದಕ್ಷಿಣ ಒಳನಾಡಿನಲ್ಲಿ ಹಗುರದಿಂದ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ದಾವಣಗೆರೆ ಮತ್ತು ರಾಮನಗರ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ನಿರೀಕ್ಷೆಯಿದೆ.
ಉತ್ತರದ ಬೀದರ್, ಕಲಬುರಗಿ, ಯಾದಗಿರಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ವಿಜಯಪುರ, ಬಾಗಲಕೋಟೆ, ರಾಯಚೂರು, ಬೆಳಗಾವಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ರಾಜಧಾನಿ ಬೆಂಗಳೂರಿನಲ್ಲಿ ಮಳೆ ಮುಂದುವರಿದಿದೆ. ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್. ಕರ್ನಾಟಕದ ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ.