ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಗದಗ, ಧಾರವಾಡ, ಕೊಪ್ಪಳ, ರಾಯಚೂರು, ಹಾವೇರಿ, ಮೈಸೂರು, ಹಾಸನ, ತುಮಕೂರು, ಚಿಕ್ಕಮಗಳೂರು, ಮಂಡ್ಯ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ತಿಳಿಸಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರು ಹಾಗೂ ಕಲಬುರಗಿಯಲ್ಲಿ ಗರಿಷ್ಠ ತಾಪಮಾನ 41 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.