WEATHER | ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಏಪ್ರಿಲ್ 3ರಿಂದ ಭಾರಿ ಮಳೆ ಸಾಧ್ಯತೆ

ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಏಪ್ರಿಲ್ 3ರಿಂದ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಇಂದು ಮೋಡಕವಿದ ವಾತಾವರಣವಿದ್ದು, ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಸಾಧಾರಣ ಮಳೆಯಾಗಲಿದೆ.

ಏಪ್ರಿಲ್ 3ರಂದು ತುಮಕೂರು, ಶಿವಮೊಗ್ಗ, ಮೈಸೂರು, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿಕ್ಕಮಗಳೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!