ಕಳೆದೊಂದು ತಿಂಗಳಿನಿಂದ ಜನರು ಬಿಸಿಲ ಹೊಡೆತಕ್ಕೆ ಕಂಗಾಲಾಗಿದ್ದರು. ಇದೀಗ ಮುಂದಿನ ನಾಲ್ಕು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ ನೀಡಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯುವ ಸಾಧ್ಯತೆ ಇದೆ.
ಮುಂದಿನ ಮೂರು ತಿಂಗಳು ವಾಡಿಕೆಗಿಂತ ಹೆಚ್ಚು ಬಿಸಿಲು ಅಬ್ಬರಿಸುವ ಸಾಧ್ಯತೆ ಇದೆ. ಈ ಮಧ್ಯೆ ಮಳೆಯೂ ಕೆಲವೊಮ್ಮೆ ತಂಪೆರೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.