ಕರಾವಳಿಯಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ನಿರೀಕ್ಷೆ ಇದೆ. ಹೀಗಾಗಿ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಗುಡ್ಡಗಾಡು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಮಲೆನಾಡಿನ ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ರಾಜಧಾನಿ ಬೆಂಗಳೂರಿನ ಪ್ರತ್ಯೇಕ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.