ಕರಾವಳಿ ಮತ್ತು ಗುಡ್ಡಗಾಡು ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಹವಾಮಾನ ಇಲಾಖೆ ಪ್ರಕಾರ ರಾಜ್ಯದ ವಿವಿಧೆಡೆ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ.
ಕರಾವಳಿಯ ಹಲವೆಡೆ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಮಲೆನಾಡಿನ ಶಿವಮೊಗ್ಗ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಮಳೆಯಾಗಲಿದೆ. ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಇರುತ್ತದೆ.
ಗುಡುಗು ಸಹಿತ ಭಾರೀ ಮಳೆಯಾಗಲಿದೆ, ಗಾಳಿಯ ವೇಗ ಗಂಟೆಗೆ 55-65 ಕಿ.ಮೀ. ಬೀಸುವ ಹಿನ್ನೆಲೆಯಲ್ಲಿ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.