ದಾವಣಗೆರೆ, ತುಮಕೂರು, ಬೆಂಗಳೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಕಲಬುರಗಿ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ಬಳ್ಳಾರಿಯಲ್ಲಿ ಸಾಧಾರಣ ಮಳೆಯಾಗಿದೆ. ಹಾವೇರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಲಘು ಮಳೆಯಾಗಿದೆ.
ಗುಡ್ಡಗಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗದಲ್ಲಿ ಸಾಧಾರಣ ಮಳೆಯಾಗಿದ್ದರೆ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಬೆಂಗಳೂರು ಭಾಗದಲ್ಲಿ ಹಗುರದಿಂದ ಭಾರೀ ಮಳೆಯಾಗುವ ನಿರೀಕ್ಷೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಮತ್ತು 21 ಡಿಗ್ರಿ ಸೆಲ್ಸಿಯಸ್ ಆಗಿದೆ.
ಕರಾವಳಿಯಲ್ಲಿ ಗಂಟೆಗೆ 35 ರಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಮೀನುಗಾರರು ಸಮುದ್ರಕ್ಕೆ ಹೋಗದಂತೆ ಸೂಚಿಸಲಾಗಿದೆ.