Sunday, October 26, 2025

WEATHER | ರಾಜ್ಯದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಅಕ್ಟೋಬರ್ 9ರವರೆಗೂ ಭಾರೀ ಮಳೆ ಎಚ್ಚರಿಕೆ

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಮಳೆ ಮುಂದುವರೆಯಲಿದೆ. ಬಂಗಾಳಕೊಲ್ಲಿಯಲ್ಲಿ ವಾಯು ಕುಸಿತ ನಿರ್ಮಾಣವಾಗಿದ್ದು, ಚಂಡಮಾರುತವಾಗಿ ರೂಪುಗೊಳ್ಳುತ್ತಿದೆ. ಪರಿಣಾಮ ಒಡಿಶಾ, ಆಂಧ್ರಪ್ರದೇಶ ಸೇರಿ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯನಗರ, ಯಾದಗಿರಿಯಲ್ಲಿ ಕೂಡ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

error: Content is protected !!