WEATHER | ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು, ಬಿರುಗಾಳಿ ಸಹಿತ ಭಾರಿ ಮಳೆ ಸಾಧ್ಯತೆ

ಮೇ 29 ರಂದು ದಕ್ಷಿಣ ಒಳಭಾಗ ಮತ್ತು ಉತ್ತರ ಒಳಭಾಗದಲ್ಲಿ ಲಘು ಮಳೆಯಾಗುವ ನಿರೀಕ್ಷೆಯಿದೆ. ಗುಡ್ಡಗಾಡು ಭಾಗಗಳಲ್ಲಿ ಸಾಧಾರಣ ಮಳೆಯಾದರೆ, ಕರಾವಳಿ ಪ್ರದೇಶಗಳಲ್ಲಿ ಪ್ರತ್ಯೇಕವಾದ ಭಾರೀ ಮಳೆಯಾಗಬಹುದು. ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ರಾಜ್ಯದ ಕೆಲವೆಡೆ ಗುಡುಗು, ಮಿಂಚು, ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹಾಸನ ಮತ್ತು ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗದ ಗುಡ್ಡಗಾಡು ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುತ್ತದೆ. ದಕ್ಷಿಣ ಕನ್ನಡ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ಉತ್ತರ ಕನ್ನಡದಲ್ಲಿ ಪ್ರತ್ಯೇಕ ಸಾಧಾರಣ ಮಳೆಯಾಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!