ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ. 40-50 ಕಿಮೀ ವೇಗದಲ್ಲಿ ಗಾಳಿ ಗುಡುಗು ಮತ್ತು ಮಿಂಚು ಬರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳಭಾಗದಲ್ಲಿ ಪ್ರತ್ಯೇಕವಾದ ಭಾರೀ ಮಳೆ ಸಾಧ್ಯ. ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31 ಮತ್ತು 22 ಡಿಗ್ರಿ ಸೆಲ್ಸಿಯಸ್ ಆಗಿದೆ.
ಉತ್ತರದ ಬಳ್ಳಾರಿ, ವಿಜಯನಗರ, ಹಾವೇರಿ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಯಾದಗಿರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.