ಒಂದು ವಾರದಿಂದ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ಇಂದು ಹೆಚ್ಚಿನ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡದಲ್ಲಿ ಹೆಚ್ಚಿನ ತಾಪಮಾನ ಮತ್ತು ಮೋಡ ಕವಿದ ವಾತಾವರಣವನ್ನು ನಿರೀಕ್ಷಿಸಲಾಗಿದೆ. ಉತ್ತರ ಒಳನಾಡಿನ ಕೆಲವು ಪ್ರದೇಶಗಳಲ್ಲಿ ತುಂತುರು ಮಳೆಯಾಗಬಹುದು.