ಉತ್ತರ ಒಳನಾಡಿನಲ್ಲಿ ಮಧ್ಯಮ ಮಳೆಯಾದರೆ, ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಸಾಧಾರಣದಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಭಾಗದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮೈಸೂರು, ಚಾಮರಾಜನಗರ, ತುಮಕೂರಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.