ವಾರವಿಡೀ ರಾಜ್ಯದ ಹಲವೆಡೆ ಮಳೆಯಾಗಿದೆ. ಇದು ಇಂದಿಗೂ ಮುಂದುವರೆಯಲಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಭಾರೀ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣದ ಉಳಿದ ಭಾಗಗಳಲ್ಲಿ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಉತ್ತರದ ಒಳನಾಡಿನ ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.