ಹೊಸದಿಗಂತ ಡಿಜಿಟಲ್ ಡೆಸ್ಕ್:
ನೈಋತ್ಯ ಮುಂಗಾರು ರಾಜ್ಯಾದ್ಯಂತ ಚುರುಕುಗೊಂಡಿದ್ದು, ಮುಂದಿನ ಮೂರು ದಿನಗಳ ಕಾಲ ವರುಣನ ಆರ್ಭಟ ಜೋರಾಗಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ನೆಚ್ಚರಿಕೆ ನೀಡಿದೆ. ಮುಖ್ಯವಾಗಿ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಪ್ರಮಾಣದ ಮಳೆಯಾಗುವ ಮುನ್ಸೂಚನೆ ಇರುವುದರಿಂದ ‘ರೆಡ್ ಅಲರ್ಟ್’ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ 20 ಸೆಂ.ಮೀ ಗಿಂತ ಹೆಚ್ಚು ಅತ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನು, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಜುಲೈ 7ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಆರೆಂಜ್ ಅಲರ್ಟ್ ಜಾರಿಯಲ್ಲಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಮತ್ತು ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ:
ಕಡಲಿಗೆ ಇಳಿಯಲು ನಿರ್ಬಂಧ:
ಸಮುದ್ರದಲ್ಲಿ ಅಲೆಗಳ ಅಬ್ಬರ ಜೋರಾಗಿದ್ದು, 60 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುತ್ತಿರುವುದರಿಂದ ಮೀನುಗಾರರು ಕಡಲಿಗೆ ಇಳಿಯಬಾರದು ಎಂದು ಹವಾಮಾನ ಇಲಾಖೆ ತಿಳಿಸಿದೆ.



