Wednesday, September 3, 2025

WEATHER |ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 6ರವರೆಗೂ ಭಾರೀ ಮಳೆಯಾಗುವ ಸೂಚನೆ

ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 6ರವರೆಗೂ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಹೇಳಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯದಲ್ಲಿ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಇದ್ದು ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 28.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇದನ್ನೂ ಓದಿ