June 17, 2026
Wednesday, June 17, 2026
spot_img

WEATHER | ಇಂದು ಕೂಡ ಭಾರೀ ಮಳೆಯಾಗುತ್ತಂತೆ: 27 ಜಿಲ್ಲೆಗಳಿಗೆ ವರುಣನ ಆಗಮನದ ಎಚ್ಚರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕದ ಹಲವೆಡೆ ಇಂದು ಸಂಜೆ ಹಾಗೂ ರಾತ್ರಿ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ರಾಜ್ಯದ ಒಟ್ಟು 27 ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ.

ಕರಾವಳಿ ಭಾಗಗಳಲ್ಲಿ ವಿಶೇಷವಾಗಿ ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸಂಜೆ ವೇಳೆಗೆ ಮೋಡ ಕವಿದ ವಾತಾವರಣದೊಂದಿಗೆ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡು ಪ್ರದೇಶಗಳಾದ ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಕೆಲವೆಡೆ ಮಳೆಯಾಗಲಿದೆ.

ಇದನ್ನೂ ಓದಿ:

ಉತ್ತರ ಒಳನಾಡಿನ ಧಾರವಾಡ, ಹಾವೇರಿ, ಬಾಗಲಕೋಟೆ, ಗದಗ, ವಿಜಯಪುರ, ದಾವಣಗೆರೆ, ವಿಜಯನಗರ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಕೂಡ ಸಂಜೆ ವೇಳೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲೂ ಮಳೆ ಸಾಧ್ಯತೆ ಇದೆ.

ಪ್ರತ್ಯಾವರ್ತ ಮಾರುತಗಳ ಪರಿಣಾಮದಿಂದ ತೇವಾಂಶ ಕಡಿಮೆಯಾಗುತ್ತಿರುವ ಹಿನ್ನೆಲೆ, ಮಾರ್ಚ್ 20ರಿಂದ ಮಳೆಯ ಪ್ರಮಾಣ ನಿಧಾನವಾಗಿ ಕಡಿಮೆಯಾಗುವ ಲಕ್ಷಣಗಳಿವೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !