ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಭಾಗಗಳು, ಕರಾವಳಿ ಮತ್ತು ಗುಡ್ಡಗಾಡು ಪ್ರದೇಶಗಳಲ್ಲಿ ನೈಋತ್ಯ ಮಾನ್ಸೂನ್ ಮುಂದುವರಿದಿದೆ. ಜೂನ್ 4 ರಂದು ದಕ್ಷಿಣ ಮತ್ತು ಉತ್ತರ ಆಂತರಿಕ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಗುಡ್ಡಗಾಡು ಮತ್ತು ಕರಾವಳಿ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುತ್ತದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಮಿಂಚು, ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹಾಸನ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಗುಡ್ಡಗಾಡು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಕರಾವಳಿಯಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.