ಕರ್ನಾಟಕದಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಕ್ಟೋಬರ್ 15ರವರೆಗೂ ಮಳೆ ಮುಂದುವರೆಯಲಿದೆ ಎನ್ನಲಾಗಿದೆ.
ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ, ತುಮಕೂರಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿನಲ್ಲಿ ಬುಧವಾರ ಮಳೆಯಾಗಿದೆ. ಕಲಬುರಗಿಯಲ್ಲಿ 32.7 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಧಾರವಾಡದಲ್ಲಿ 19.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.