WEATHER | ಕರಾವಳಿ, ಮಲೆನಾಡು ಭಾಗದಲ್ಲಿ ವಿಪರೀತ ಮಳೆ, ಯೆಲ್ಲೋ ಅಲರ್ಟ್‌ ಘೋಷಣೆ

ಈ ವಾರಾಂತ್ಯದಲ್ಲಿ ಕರಾವಳಿಯಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿ ಪ್ರದೇಶಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಅತಿ ಹೆಚ್ಚು ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಗಾಳಿಯ ವೇಗ ಗಂಟೆಗೆ 30-40 ಕಿಮೀ, ಭಾರೀ ಮಳೆ ಮತ್ತು ಗುಡುಗು ಸಹಿತ ಬಿರುಗಾಳಿ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಕಲಬುರಗಿ, ಯಾದಗಿರಿ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!