ರಾಜ್ಯಾದ್ಯಂತ ಮಳೆ ಮುಂದುವರಿದಿದೆ. ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗಲಿದೆ. ಗುಡ್ಡಗಾಡು ಪ್ರದೇಶಗಳಲ್ಲಿ ಸಾಧಾರಣ ಮಳೆ ಮುಂದುವರಿಯುವ ನಿರೀಕ್ಷೆ ಇದೆ. ದಕ್ಷಿಣ ಭಾಗದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಗುಡ್ಡಗಾಡು ಪ್ರದೇಶಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ ಮಳೆಯಾಗಲಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಭಾರೀ ಮಳೆಯಾಗಲಿದೆ.