ರಾಜ್ಯದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಜನರು ಪರದಾಡುವಂತಾಗಿದೆ. ಕರಾವಳಿ ಕರ್ನಾಟಕದಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ. ಗುಡ್ಡಗಾಡು ಪ್ರದೇಶದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳಭಾಗದಲ್ಲಿ ಸಾಧಾರಣ ಮಳೆ ಮತ್ತು ಉತ್ತರದ ಒಳಭಾಗದಲ್ಲಿ ಲಘು ಮಳೆ ಸಾಧ್ಯತೆ.
ಗುಡುಗು ಸಹಿತ ಭಾರೀ ಮಳೆಯಾಗಲಿದ್ದು, ಗಾಳಿಯ ವೇಗ ಗಂಟೆಗೆ 30-40 ಕಿ.ಮೀ. ಬಿಸಲಿದೆ ಹೀಗಾಗಿ ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಉಡುಪಿ ಮತ್ತು ಹಾಸನ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಗಾಳಿಯ ವೇಗ ಗಂಟೆಗೆ 40-50 ಕಿಮೀ ಆಗಲಿದ್ದು, ಉತ್ತರ ಕನ್ನಡ, ಬೆಳಗಾವಿ ಮತ್ತು ಮೈಸೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಹೀಗಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.