ರಾಜ್ಯಾದ್ಯಂತ ಮಳೆ ಪ್ರಮಾಣ ಕಡಿಮೆಯಾಗಿದೆ. ಕರಾವಳಿ ಕರ್ನಾಟಕದಲ್ಲಿ ಇಂದು ಸಾಧಾರಣ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದರೆ, ಗುಡ್ಡಗಾಡು ಪ್ರದೇಶಗಳು ಮತ್ತು ಉತ್ತರ ಒಳನಾಡಿನಲ್ಲಿ ಲಘು ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಸೂಚಿಸುತ್ತದೆ.
ಹಾಸನ, ಕೊಡಗು, ಚಿಕ್ಕಮಗಳೂರಿನಲ್ಲಿ ಸಾಧಾರಣ ಮಳೆಯಾಗಿದ್ದರೆ, ಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಕರಾವಳಿಯಲ್ಲಿ ಲಘು ಮಳೆಯಾಗಲಿದೆ.
ಗಾಳಿಯು ಗಂಟೆಗೆ 30-40 ಕಿಮೀ ವೇಗದಲ್ಲಿ ಬೀಸುತ್ತದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ.